ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರ 66 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 63 ವರದಿ ನೆಗೆಟಿವ್ ಬಂದಿದೆ. ಸದ್ಯ ಜಿಲ್ಲೆಯಲ್ಲಿ 2584 ಜನ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿಯೇ ಇದೀಗ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಪರೀಕ್ಷಾ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದ್ದು, ಜೂ. 20 ರಂದು 66 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಇದರಲ್ಲಿ 63 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದೆ. ಉಳಿದ 03 ಮಾದರಿಗಳು ಇತರೆ ಕಾರಣಗಳಿಗೆ ತಿರಸ್ಕøತಗೊಂಡಿವೆ. ವರದಿ ಬರುವ ಯಾವುದೇ ಪ್ರಕರಣ ಬಾಕಿ ಇರುವುದಿಲ್ಲ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 43 ಇದ್ದು, ಎಲ್ಲ 43 ಜನ ಈಗಾಗಲೆ ಗುಣಮುಖರಾಗಿದ್ದಾರೆ. ಈವರೆಗೆ 4356 ಜನರ ಮಾದರಿ ಸಂಗ್ರಹಿಸಲಾಗಿದ್ದು, 4186 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 129 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.