ಚಳ್ಳಕೆರೆ-೧೮ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎನ್.ವೈ.ಗೋಪಾಲಕೃಷ್ಣ ಬಿಜೆಪಿ ಸೇರ್ಪಡೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನಗೆ ಉತ್ತರಿಸಿದ ಅವರು, ಗೋಪಾಲಕೃಷ್ಣ ಬಿಜೆಪಿ ಸೇರ್ಪಡೆ ಹಾಗೂ ಕೂಡ್ಲಗಿ ಕ್ಷೇತ್ರದ ಅಭ್ಯರ್ಥಿಯಾಗುವ ಬಗ್ಗೆ ಈಗಾಗಲೇ ಪಕ್ಷದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಕ್ತ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ಥನರೆಡ್ಡಿ ತಿಳಿಸಿದರು.
ಅವರು, ಬೆಂಗಳೂರಿನಿಂದ ಮೊಳಕಾಲ್ಮೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಚಳ್ಳಕೆರೆಯ ಅಬಕಾರಿ ಗುತ್ತಿಗೆದಾರ, ಬಿಜೆಪಿ ಹಿರಿಯ ಮುಖಂಡ ಪಿ.ರಾಮಕೃಷ್ಣರೆಡ್ಡಿ ನಿವಾಸಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಮಾತು ಕಥೆ ನಡೆಸಿದ್ದು, ಕಳೆದ ಸುಮಾರು ೨೦ ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂದರ್ಭ ಬಂದಲ್ಲಿ ಯಡಿಯೂರಪ್ಪನವರೊಂದಿಗೆ ರಾಜ್ಯದ ವಿವಿಧೆಡೆ ಪ್ರಚಾರ ಕೈಗೊಳ್ಳುವೆ.
ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳು ಭೌಗೋಳಿಕವಾಗಿ ಬೇರೆ ಬೇರೆಯಾದರೂ ಎರಡೂ ಜಿಲ್ಲೆಗಳ ಜನ ಜೀವನದಲ್ಲಿ ತುಂಬಾ ಹೊಲಿಕೆ ಇದೆ. ಬಳ್ಳಾರಿ ಜಿಲ್ಲೆ ಅತಿ ಹೆಚ್ಚು ಬಿಸಿಲನ್ನು ಹೊಂದಿದ್ದು, ಚಿತ್ರದುರ್ಗ ಜಿಲ್ಲೆ ಬಂಡೆಗಳ ನಾಡಾಗಿದ್ದು, ಇಲ್ಲೂ ಸಹ ಬಿಸಿಲು ಹೆಚ್ಚಾಗಿದೆ. ಕಾರ್ಯಕರ್ಯರು ಮತ್ತು ಅಭಿಮಾನಿಗಳನ್ನು ಕಂಡು ನನಗೆ ಸಂತಸವಾಗಿದೆ. ಇವರೆಲ್ಲರ ಆಗಮನ ಮತ್ತು ದರ್ಶನದಿಂದ ನನಗೆ ಹೊಸ ಶಕ್ತಿ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆ ಗೆಲುವೊಂದನ್ನೇ ಮಾನದಂಡವನ್ನಾಗಿಟ್ಟುಕೊಂಡು ಪಕ್ಷದ ಎಲ್ಲಾ ಅಭ್ಯರ್ಥಿಗಳು ದಾಖಲಾತಿ ಅಂತರದರಲ್ಲಿ ಜಯಗಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಕ್ಷೇತ್ರದ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ, ಬಿಜೆಪಿ ಯುವ ಮುಖಂಡ ಬಾಳೆಕಾಯಿ ರಾಮದಾಸ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್, ಮಂಡಲಾಧ್ಯಕ್ಷ ಬಿ.ವಿ.ಸಿರಿಯಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಹೊನ್ನೂರು ಜಯಶೀಲರೆಡ್ಡಿ, ನಗರಸಭಾ ಸದಸ್ಯ ಜೆ.ಕೆ.ರವಿ, ಡಿ.ಎಂ.ತಿಪ್ಪೇಸ್ವಾಮಿ, ಎ.ವಿಜಯೇಂದ್ರ, ಚಿದಾನಂದಗುಪ್ತ, ಯಾದವರೆಡ್ಡಿ, ಸುರೇಶ್, ಗುಜ್ಜಾರಪ್ಪ, ರಾಜಣ್ಣ, ಬಂಡೆರಂಗಪ್ಪ, ನಾಗೇಶ್‌ನಾಯಕ, ಜೆ.ಮಂಜುನಾಥ, ಪರಮೇಶ್, ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.