ಚಿತ್ರದುರ್ಗ: ದೇಶದ ಮಾಜಿ ಉಪಪ್ರಧಾನಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂರವರ 112 ನೇ ಜನ್ಮದಿನಾಚರಣೆಯನ್ನು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಮಾಜಿ ಸಚಿವ ಹೆಚ್.ಆಂಜನೇಯ ಡಾ.ಬಾಬುಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಉಪಾಧ್ಯಕ್ಷ ಆರ್.ಕೆ.ನಾಯ್ಡು, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಡಿ.ದುರುಗೇಶ್, ಬಿ.ಟಿ.ಜಗದೀಶ್, ಕೆ.ಪಿ.ಸಂಪತ್‍ಕುಮಾರ್, ಹೆಚ್.ಸಿ.ನಿರಂಜನಮೂರ್ತಿ, ಕೆ.ಪಿ.ಸಿ.ಸಿ.ಕಾರ್ಯದರ್ಶಿಗಳಾದ ಎಂ.ಜಯಣ್ಣ, ಹನುಮಲಿ ಷಣ್ಮುಖಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್, ಗ್ರಾಮಾಂತರ ಅಧ್ಯಕ್ಷ ಆರ್.ಪ್ರಕಾಶ್, ಜಿ.ಪಂ.ಸದಸ್ಯ ಬಿ.ಪಿ.ಪ್ರಕಾಶ್‍ಮೂರ್ತಿ, ಆರ್.ಶೇಷಣ್ಣಕುಮಾರ್, ಮುದಸಿರ್ ನವಾಜ್, ಬಿ.ಜಿ.ಶ್ರೀನಿವಾಸ್, ಪೈಲ್ವಾನ್ ತಿಪ್ಪೇಸ್ವಾಮಿ, ಎಂ.ಕೆ.ತಾಜ್‍ಪೀರ್, ಚಾಂದ್‍ಪೀರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.