ಚಿತ್ರದುರ್ಗ : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ.

ಗುರುವಾರದ ವರದಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಗೊಲ್ಲರಹಳ್ಳಿಯ 17 ವರ್ಷದ ಯುವಕ ಹಾಗೂ ಚಿತ್ರದುರ್ಗದ 28 ವರ್ಷದ ಯುವಕ ಸೇರಿದಂತೆ ಇಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.  ಗುರುವಾರ ಒಟ್ಟು 53 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.   ಜಿಲ್ಲೆಯ ಒಟ್ಟು 94 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೆ 72 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 22 ಸಕ್ರಿಯ ಪ್ರಕರಣಗಳು ಇವೆ.
22 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 09, ಹಿರಿಯೂರು ತಾಲ್ಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 02, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 01, ಪರಶುರಾಂಪುರ-03, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 04, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ 01 ಹಾಗೂ ಹೊಸದುರ್ಗ ತಾಲ್ಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 25 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 2612 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 446 ಜನ ಹೋಂ ಕ್ವಾರಂಟೈನ್‍ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇದ್ದಾರೆ.  ಈವರೆಗೆ 8134 ಜನರ ಮಾದರಿ ಸಂಗ್ರಹಿಸಲಾಗಿದ್ದು, 5535 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 182 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.