ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ 10 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.  ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 320 ಕ್ಕೆ ಏರಿಕೆಯಾದಂತಾಗಿದೆ.
ಗುರುವಾರದ ವರದಿಯಲ್ಲಿ ಚಿತ್ರದುರ್ಗ ತಾಲ್ಲೂಕು-03, ಹಿರಿಯೂರು-01, ಚಳ್ಳಕೆರೆ-03, ಹೊಸದುರ್ಗ-03 ಸೇರಿದಂತೆ ಒಟ್ಟು 10 ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಚಿತ್ರದುರ್ಗ ನಗರದ 71 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 26, 42 ವರ್ಷದ ಪುರುಷರು ಹಾಗೂ 71 ವರ್ಷದ ಮಹಿಳೆ.  ಹಿರಿಯೂರು ತಾಲ್ಲೂಕಿನಲ್ಲಿ 41 ವರ್ಷದ ಮಹಿಳೆ.  ಚಳ್ಳಕೆರೆ ತಾಲ್ಲೂಕಿನಲ್ಲಿ 54, 27, 56 ವರ್ಷದ ಮಹಿಳೆಯರು. ಹೊಸದುರ್ಗ ತಾಲ್ಲೂಕಿನಲ್ಲಿ 47 ವರ್ಷದ ಪುರುಷ ಹಾಗೂ 30, 25 ವರ್ಷದ ಮಹಿಳೆ ಸೇರಿದಂತೆ ಒಟ್ಟು 10 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಗುರುವಾರ ಒಟ್ಟು 311 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 10 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 320 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 07 ಜನ ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 135 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 178 ಸಕ್ರಿಯ ಪ್ರಕರಣಗಳು ಇವೆ.
178 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 38, ಭರಮಸಾಗರ-10, ಹಿರಿಯೂರು ತಾಲ್ಲೂಕು ಧರ್ಮಪುರ-29, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 10, ಹೊಸದುರ್ಗ ತಾಲ್ಲೂಕು ಬೆಲಗೂರು- 14, ಕೆ.ಕೆ. ಪುರ 09, ಮೊಳಕಾಲ್ಮೂರು ತಾಲ್ಲೂಕು ರಾಂಪುರ 01,   ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 07, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ-08, ಹೊಳಲ್ಕೆರೆ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‍ನಲ್ಲಿ 03, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 10.  ಉಳಿದ 21 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 87 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 3301 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರೈನ ಒಟ್ಟು 3765 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ 1066 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 11844 ಜನರ ಮಾದರಿ ಸಂಗ್ರಹಿಸಲಾಗಿದ್ದು, 10626 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 212 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.