ಚಿತ್ರದುರ್ಗ ; ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಮತ್ತೆ 17 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 218 ಕ್ಕೆ ಏರಿಕೆಯಾದಂತಾಗಿದೆ.

ಭಾನುವಾರದ ವರದಿಯಲ್ಲಿ ಚಿತ್ರದುರ್ಗದ 39, 40 ವರ್ಷದ ಪುರುಷರು, 60 ವರ್ಷದ ಮಹಿಳೆ. ಹೊಸದುರ್ಗದ 01 ವರ್ಷದ ಗಂಡು ಮಗು ಹಾಗೂ 97, 60, 25, 60 ವರ್ಷದ ಮಹಿಳೆಯರು. ಹಿರಿಯೂರಿನ 21, 34, 24, 32 ವರ್ಷದ ಪುರುಷರು, 28, 41 ವರ್ಷದ ಮಹಿಳೆಯರು. ಹೊಳಲ್ಕೆರೆಯ 36 ವರ್ಷದ ಪುರುಷ, 34, 60 ವರ್ಷದ ಮಹಿಳೆಯರು ಸೇರಿದಂತೆ ಒಟ್ಟು 17 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಭಾನುವಾರ ಒಟ್ಟು 160 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 17 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 218 ಕ್ಕೆ ಏರಿಕೆಯಾಗಿದ್ದು, : ಮೂವರು ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 112 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 103 ಸಕ್ರಿಯ ಪ್ರಕರಣಗಳು ಇವೆ.

103 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 34, ಭರಮಸಾಗರ-05, ಹಿರಿಯೂರು ತಾಲ್ಲೂಕು ಧರ್ಮಪುರ-11, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 07, ಹೊಸದುರ್ಗ ತಾಲ್ಲೂಕು ಬೆಲಗೂರು- 11, ಕೆ.ಕೆ. ಪುರ 05,  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 05, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 05 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 09.  ಉಳಿದ ಒಬ್ಬರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 60 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2342 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 3437 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ 468 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 10,925 ಜನರ ಮಾದರಿ ಸಂಗ್ರಹಿಸಲಾಗಿದ್ದು, 7,790 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 205 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.