ಚಿತ್ರದುರ್ಗ :ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ಮತ್ತೆ 23 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 270 ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೆ ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

ಮಂಗಳವಾರದ ವರದಿಯಲ್ಲಿ ಚಿತ್ರದುರ್ಗದ 35, 53, 36, 46 ವರ್ಷದ ಪುರುಷರು, 55 ವರ್ಷದ ಮಹಿಳೆ. ಹೊಸದುರ್ಗದ 36, 39 ವರ್ಷದ ಪುರುಷರು, 25 ವರ್ಷದ ಮಹಿಳೆ. ಹಿರಿಯೂರಿನ 35, 04, 71, 63, 09, 28, 16 ವರ್ಷದ ಪುರುಷರು, 48, 68, 55, 35 ವರ್ಷದ ಮಹಿಳೆ. ಹೊಳಲ್ಕೆರೆಯ 60 ವರ್ಷದ ಪುರುಷ.  ಚಳ್ಳಕೆರೆ ತಾಲೂಕಿನ 70, 30 ವರ್ಷದ ಪುರುಷರು, 55 ವರ್ಷದ ಮಹಿಳೆ ಸೇರಿದಂತೆ ಒಟ್ಟು 23 ಜನರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.  ಈ ಪೈಕಿ ಹಿರಿಯೂರಿನ 63 ವರ್ಷದ ಪುರುಷ ಕೋವಿಡ್ ನಿಂದ ಮೃತಪಟ್ಟ ಪ್ರಕರಣ ವರದಿಯಾಗಿದೆ.

ಮಂಗಳವಾರ ಒಟ್ಟು 296 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 23 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 270 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 06 ಜನ ಮೃತಪಟ್ಟಿದ್ದಾರೆ.  ಸೋಂಕಿತರ ಪೈಕಿ ಈಗಾಗಲೆ 125 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 139 ಸಕ್ರಿಯ ಪ್ರಕರಣಗಳು ಇವೆ.

139 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 35, ಭರಮಸಾಗರ-02, ಹಿರಿಯೂರು ತಾಲ್ಲೂಕು ಧರ್ಮಪುರ-26, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ- 09, ಹೊಸದುರ್ಗ ತಾಲ್ಲೂಕು ಬೆಲಗೂರು- 12, ಕೆ.ಕೆ. ಪುರ 05,  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ- 05, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ 06 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 09.  ಉಳಿದ 20 ಜನರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 69 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2637 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.  ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರೈನ ಒಟ್ಟು 3581 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ 837 ಜನ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 11403 ಜನರ ಮಾದರಿ ಸಂಗ್ರಹಿಸಲಾಗಿದ್ದು, 8507 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 207 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.