ಚಿತ್ರದುರ್ಗ: ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿ ಮುಂದಿನ ಬದುಕಿಗೆ ಕಾಲಿಡುವ ಸಂದರ್ಭದಲ್ಲಿ ತಮ್ಮ ಬದುಕು ಸದಾ ಜ್ಞಾನದ ಬೆಳಕಿನಂತಿರಲಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಮಹಾದೇವ ಜೋಷಿ ಶುಭ ಹಾರೈಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಪಿ.ಜಿ.ಬ್ಲಾಕ್ ಸಭಾಂಗಣದಲ್ಲಿ ಸ್ನಾತಕೋತ್ತರ ಗಣಿತ ಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಹಾಗು ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾ ಹೋದಂತೆ ಬುದ್ಧಿ ಶಕ್ತಿ ಸಾಮರ್ಥ್ಯವೂ ಹೆಚ್ಚುತ್ತದೆ ಜ್ಞಾನ ಎಂಬುದು ದೊಡ್ಡ ಸಾಗರವಿದ್ದಂತೆ ಇದನ್ನು ಬೆಳೆಸಿಕೊಂಡು ಗುಣಮಟ್ಟದ ಸಂಶೋಧನೆಗಳನ್ನು ನಡೆಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಾಗೂ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದರು. ದಾವಣಗೆರೆ ವಿಶ್ವ ವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರಾದ ಡಾ.ಜಿ.ಎಸ್.ವೆಂಕಟರೆಡ್ಡಿಯವರು ಮಾತನಾಡಿ ಇಂದಿನ ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಉತ್ತಮ ಬದುಕು ರೂಪಿಸಿಕೊಳ್ಳಿ ಎಂದರು ಹಾಗೂ ತಮ್ಮ ಯಾವುದೆ ಕೆಲಸ ಕಾರ್ಯಗಳಿದ್ದರು ಸಹಕಾರ ನೀಡುವುದಾಗಿ ತಿಳಿಸಿದರು.

ಪ್ರಾಂಶುಪಾಲರಾದ ಟಿ.ವಿ.ಸಣ್ಣಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಹೊನ್ನೂರ ರೆಡ್ಡಿ, ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಕೆ.ಟಿ.ತಿಮ್ಮಾರೆಡ್ಡಿ, ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಲಕ್ಷ್ಮೀನಾರಾಯಣ ರೆಡ್ಡಿ, ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಕೆ.ಜಿ.ಚನ್ನಬಸಪ್ಪ , ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ.ಸಿ.ವಿ.ಕೊಟ್ರಪ್ಪ ಇವರನ್ನು ಹಾಗೂ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳಾದ ಚಂದನ, ಸುಪ್ರಿಯ, ಅರ್ಪಿತ, ವೀಣಾ, ಹಾಗೂ ಸಹನ ಇವರನ್ನು ಸನ್ಮಾನಿಸಲಾಯಿತು. ಸ್ನಾತಕ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಬಸವರಾಜಪ್ಪ, ಸ್ನಾತಕೋತ್ತರ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎನ್.ಬಿ.ಗಟ್ಟಿ, ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ಸಂಚಾಲಕರಾದ ಡಾ.ವಿಶಾಲಾಕ್ಷಿ ಸಹಾಯಕ ಪ್ರಾಧ್ಯಾಪಕರಾದ ಡಾ.ಮಂಜುನಾಥ್, ಪ್ರೊ.ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು. ಮಹಾಲಕ್ಷ್ಮಿ ಪ್ರಾರ್ಥಿಸಿದರು, ರಂಜಿತ ಮತ್ತು ಕವಿತ ಸ್ವಾಗತಿಸಿದರು ಎಂ.ಆರ್.ಅಮೃತಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.