ಚಿತ್ರದುರ್ಗ: ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 03 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು,  ಪರೀಕ್ಷೆಗಳನ್ನು ಶಾಂತಿಯುತ, ಸುವ್ಯವಸ್ಥಿತ ಹಾಗೂ ಪಾರದರ್ಶಕತೆಯಿಂದ ನಡೆಸಲು ಚಿತ್ರದುರ್ಗ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಚಿತ್ರದುರ್ಗ ತಾಲ್ಲೂಕಿನ 25, ಚಳ್ಳಕೆರೆ ತಾಲ್ಲೂಕಿನ 18, ಹಿರಿಯೂರು ತಾಲ್ಲೂಕಿನ 14, ಹೊಳಲ್ಕೆರೆ ತಾಲ್ಲೂಕಿನ 11, ಹೊಸದುರ್ಗ ತಾಲ್ಲೂಕಿನ 12 ಹಾಗೂ ಮೊಳಕಾಲ್ಮೂರು ತಾಲ್ಲೂಕಿನ 07 ಪರೀಕ್ಷಾ ಕೇಂದ್ರಗಳು ಸೇರಿದಂತೆ ಚಿತ್ರದುರ್ಗ ಜಿಲ್ಲೆಯಾದ್ಯಂತ 87 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ನಿಷೇಧಾಜ್ಞೆ ಅನ್ವಯ ಪರೀಕ್ಷೆಗಳು ನಡೆಯುವ ಕೇಂದ್ರಗಳ ಬಳಿ ಇರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು, ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.