ಚಿತ್ರದುರ್ಗ: ದೇಶದ ಮಾಜಿ ಉಪ ಪ್ರಧಾನಿ ಡಾ.ಬಾಬುಜಗಜೀವನರಾಂರವರು ಕೇವಲ ಹಸಿರುಕ್ರಾಂತಿಯ ಹರಿಕಾರರಾಗಿರಲಿಲ್ಲ. ದೇಶ ರಕ್ಷಣೆಗೆ ಅವರ ಕೊಡುಗೆ ಅಪಾರವಾದುದು ಎಂದು ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಡಾ.ಬಾಬುಜಗಜೀವನರಾಂ ರವರ ೩೪ ಪುಣ್ಯತಿಥಿಯಲ್ಲಿ ಭಾಗವಹಿಸಿ ಮಾತನಾಡಿದರು. ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಆರಂಭವಾದಾಗಿನಿಂದಲೂ ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ರಕ್ಷಣೆಗಾಗಿ ಕಾನೂನುಗಳನ್ನು ರೂಪಿಸಿದ ಮಹಾನ್ ಮುತ್ಸದಿ. ಜವಾಹರ್‌ಲಾಲ್‌ನೆಹರು, ಇಂದಿರಾಗಾಂಧಿರವರ ಜೊತೆ ಒಡನಾಡಿಯಾಗಿದ್ದ ಡಾ.ಬಾಬುಜಗಜೀವನರಾಂರವರು ೧೯೭೨ ರಲ್ಲಿ ಪಾಕಿಸ್ತಾನ ಭಾರತದ ಮೇಲೆ ಯುದ್ದ ನಡೆಸಿದಾಗ ಇಂದಿರಾಗಾಂಧಿರವರ ಸಾರಥಿಯಾಗಿ ದೇಶ ರಕ್ಷಣೆಗೆ ಮುಂದಾಗಿದ್ದನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕೆಂದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ ಡಾ.ಬಾಬುಜಗಜೀವನರಾಂರವರಂತಹ ಮಹಾಪುರುಷರ ಇತಿಹಾಸ, ತತ್ವ ಸಿದ್ದಾಂತ, ಆದರ್ಶಗಳನ್ನು ಕಾಂಗ್ರೆಸ್‌ನ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಇಂದಿರಾಗಾಂಧಿ, ರಾಜೀವ್‌ಗಾಂಧಿರವರ ಒಡನಾಡಿಯಾಗಿದ್ದ ಹೆಚ್.ಹನುಮಂತಪ್ಪನವರಿಂದ ಕಾಂಗ್ರೆಸ್ ಬಗ್ಗೆ ತಿಳಿದುಕೊಳ್ಳುವುದು ಸಾಕಷ್ಟಿದೆ. ಪಕ್ಷದ ಬಗ್ಗೆ ಮೊದಲು ಎಲ್ಲರೂ ಅಭಿಮಾನ ಬೆಳೆಸಿಕೊಳ್ಳಬೇಕೆಂದರು.

ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ನರಸಿಂಹರಾಜು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಾತ್ಯರಾಜನ್ ಕಾರ್ಯಕ್ರಮದ ಅಧ್ಯಕ್ಷತೆ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‌ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜು ಇವರುಗಳು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಆರ್.ಕೆ.ನಾಯ್ಡು, ಅಜ್ಜಪ್ಪ, ನಜ್ಮತಾಜ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಓ.ಬಿ.ಸಿ.ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ.ಕುಮಾರ್, ಮುದಸಿರ್ ನವಾಜ್, ಫೈಲ್ವಾನ್ ತಿಪ್ಪೇಸ್ವಾಮಿ, ಕಾರ್ಮಿಕ ವಿಭಾಗದ ಮೋಹನ್ ಪೂಜಾರಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಎಂ.ಡಿ.ಹಸನ್‌ತಾಹೀರ್, ಎ.ಸಾಧಿಕ್‌ವುಲ್ಲಾ, ಹೆಚ್.ಶಬ್ಬೀರ್‌ಭಾಷ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.