ಚಿತ್ರದುರ್ಗ:  ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಮಾಜಿ ಉಪ ಪ್ರಧಾನಿಗಳಾದ ಡಾ; ಬಾಬು ಜಗಜೀವನ್ ರಾಮ್ ರವರ 113 ನೇ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 5 ರಂದು ಆಚರಿಸಲಾಯಿತು.

ಈ ವೇಳೆ  ಬಿಡಿಎ ಆಯುಕ್ತರು ಹಾಗೂ ಕೋವಿಡ್-19 ಜಿಲ್ಲಾ ನೋಡಲ್ ಅಧಿಕಾರಿ ಪ್ರಕಾಶ್ ಜಿ.ಸಿ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಾಂಬ, ಜಿಲ್ಲಾ ರಕ್ಷಣಾಧಿಕಾರಿ ರಾಧಿಕ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಡಾ; ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.