ಸಿರಿಗೆರೆ: ನಾಡಿನ ಹೆಸರಾಂತ ಧಾರ್ಮಿಕ ಕೇಂದ್ರವಾದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ 20ನೆಯ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 25ನೆಯ ಶ್ರದ್ಧಾಂಜಲಿ 2017 ರ ಸೆಪ್ಟಂಬರ್ 20 ರಿಂದ 24 ರವರೆಗೆ ನಡೆಯುವ ಎಲ್ಲಾ ದಿನಗಳ ಕಾರ್ಯಕ್ರಮಗಳು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶಿಷ್ಟವಾಗಿ ಜರುಗಲಿದೆ ಎಂದು ಬೃಹನ್ಮಠದ ಪ್ರಕಟಣೆ ತಿಳಿಸಿದೆ.

ಸೆಪ್ಟಂಬರ್ 20 ರ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಜಿ. ಲೋಕೇಶ್ ಅವರು ಉದ್ಘಾಟಿಸಲಿದ್ದಾರೆ. ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ. ಪಂಡಿತಾರಾಧ್ಯ ಸ್ವಾಮೀಜಿ ಸಮ್ಮುಖದಲ್ಲಿ ಸಚಿವರಾದ ಎಚ್. ಆಂಜನೇಯ, ದಾವಣಗೆರೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಲಕ್ಷ್ಮಣ್ ನಿಂಬರಗಿ, ಹೊನ್ನಾಳಿ ಶಾಸಕ ಶಾಂತನಗೌಡ, ಮಾಜಿ ಶಾಸಕರಾದ ಕೆ.ಬಿ. ಮಲ್ಲಿಕಾರ್ಜುನ ಹಾಗೂ ಎಂ. ಚಂದ್ರಪ್ಪ ಉಪಸ್ಥಿತರಿರುವರು.

ಸೆಪ್ಟಂಬರ್ 21 ರ ಸಂಜೆ 6 ಗಂಟೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರದ ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಚಿತ್ರದುರ್ಗ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ದಾವಣಗೆರೆ ಜಿ.ಪಂ. ಮುಖ್ಯ ಕಾರ್ಯದರ್ಶಿ ಎಸ್. ಅಶ್ವತಿ, ಪೂರ್ವ ವಲಯ ಐ.ಜಿ.ಪಿ. ಎ.ಎಂ. ಸಲೀಂ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಶಿಲ್ಪಿ ರು ಕಾಳಾಚಾರ್, ಶಾಸಕರಾದ ಯು.ಬಿ. ಬಣಕಾರ ಮತ್ತು ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಮಾಜಿ ಶಾಸಕ ಡಿ.ಎಸ್. ಸುರೇಶ್ ಉಪಸ್ಥಿತರಿರುವರು.

ಸೆಪ್ಟಂಬರ್ 22 ರ ಸಂಜೆ 6 ಗಂಟೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರದ ಅತಿಥಿಗಳಾಗಿ ಸಚಿವ ಟಿ.ಬಿ. ಜಯಚಂದ್ರ, ಕೃಷ್ಣ ಭೈರೇಗೌಡ, ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಬಿ. ಟಾಕಪ್ಪ, ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಭೀಮಾಶಂಕರ ಎಸ್. ಗುಳೇದ, ಶಾಸಕರಾದ ಬಿ.ಜಿ. ಗೋವಿಂದಪ್ಪ, ವಡ್ನಾಳ್ ರಾಜಣ್ಣ ಹಾಗೂ ಮಾಜಿ ಶಾಸಕ ಡಾ. ವೈ.ಸಿ. ವಿಶ್ವನಾಥ್ ಉಪಸ್ಥಿತರಿರುವರು.

ಸೆಪ್ಟಂಬರ್ 23 ರ ಬೆಳಿಗ್ಗೆ 11 ಕ್ಕೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶಾಲಾಕಾಲೇಜುಗಳಲ್ಲಿ ಅಭ್ಯಸಿಸಿದ್ದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ. ಪಂಡಿತಾರಾಧ್ಯ ಸ್ವಾಮೀಜಿ ಻ವರ ಸಾನ್ನಿಧ್ಯದಲ್ಲಿ ಜರುಗಲಿದೆ. ಅತಿಥಿಗಳಾಗಿ ಗುಲಬರ್ಗ ವಿ.ವಿ. ಕುಲಪತಿ ಡಾ.ಎಸ್.ಆರ್. ನಿರಂಜನ, ಗುಡಿಹಳ್ಳಿ ನಾಗರಾಜ, ಜಿ.ಎನ್. ಮಲ್ಲಿಕಾರ್ಜುನಪ್ಪ, ಎಂ. ರೇವಣಸಿದ್ದಪ್ಪ, ಯತೀಶ್ ಚಂದ್ರ, ರಾಧಾಕೃಷ್ಣ ಪಲ್ಲಕ್ಕಿ, ಡಾ.ಜಿ.ಎಲ್. ಪ್ರವೀಣ್ ಕುಮಾರ್, ಡಾ.ಬಿ.ವಿ. ವಸಂತಕುಮಾರ್, ಡಾ.ಬಿ. ಶ್ರೀನಿವಾಸ ಹಾಗೂ ಡಾ.ಎಂ. ಮಂಜುನಾಥ ಭಾಗವಹಿಸುವರು.

ಸಂಜೆ 6 ಗಂಟೆಗೆ ನಡೆಯುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸುಮಾರು 300 ವಿದ್ಯಾರ್ಥಿಗಳು ವಿಶಿಷ್ಟ ತರಬೇತಿ ಪಡೆದಿರುವ ಜಾನಪದ ಸಿರಿ ಸಂಭ್ರಮ ಕಾರ್ಯಕ್ರಮದ ಅತಿಥಿಗಳಾಗಿ ಸಂಸತ್ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದರಾದ ಜಿ.ಎಂ. ಸಿದ್ದೇಶ್ವರ, ಬಿ.ಎನ್. ಚಂದ್ರಪ್ಪ, ಶಾಸಕರಾದ ಬಸವರಾಜ ಬೊಮ್ಮಾಯಿ, ಎಚ್.ಪಿ. ರಾಜೇಶ್, ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ಶ್ರೀನಾಥ್ ಎಂ. ಜೋಷಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎನ್. ರವೀಂದ್ರ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹಾಗೂ ಎಸ್.ವಿ. ರಾಮಚಂದ್ರ ಉಪಸ್ಥಿತರಿರುವರು.

ಸೆಪ್ಟಂಬರ್ 23 ರ ಬೆಳಿಗ್ಗೆ 11 ಕ್ಕೆ ನಡೆಯಲಿರುವ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 25ನೆಯ ಶ್ರದ್ಧಾಂಜಲಿ ಕಾರ್ಯಕ್ರಮವು ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಸಚಿವ ಕಾಗೋಡು ತಿಮ್ಮಪ್ಪ, ಶಾಸಕ ಹಾಗೂ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಉಪಸ್ಥಿತರಿರುವರು.