ಕೊಪ್ಪ: ದಕ್ಷಿಣ ಭಾರತದ ಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ ಹುಲಿಗೆಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ.

ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆ, ಮೇ 15 ರಿಂದ 18 ರವರೆಗೆ ನಡೆಯಬೇಕಿದ್ದ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆಯ ರಥೋತ್ಸವ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.