ಚಿತ್ರದುರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಒಬ್ಬರೇ ಸಂವಿಧಾನ ರಚಿಸಿಲ್ಲವೆಂದು ಅವಮಾನಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಂಬೇಡ್ಕರ್ ಸೇನೆ(ರಿ.) ವತಿಯಿಂದ ಬೃಹತ್ ಪ್ರತಿಭಟನೆ ಮೆರವಣಿಗೆಯನ್ನು ನಡೆಸಲಾಯಿತು.

ಬಾಬಾ ಸಾಹೇಬರ ಸತತ ಪರಿಶ್ರಮ ಹಾಗೂ ಪ್ರಯತ್ನದಿಂದ ರೂಪುಗೊಂಡ ವಿಶ್ವಶ್ರೇಷ್ಠ ಸಂವಿಧಾನವನ್ನು ಇಡೀ ವಿಶ್ವವೇ ಮೆಚ್ಚಿರುವಾಗ ಕೆಲವು ಮನುವಾದಿಗಳು ಹಾಗೂ ಫ್ಯಾಶಿಸ್ಟರು ತಮಗೆ ಬೇಕಾದಂತೆ ಸಂವಿಧಾನವನ್ನು ತಿರುಚುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ರೀತಿಯಲ್ಲಿ ಸಂವಿಧಾನದ ವಿರುದ್ಧ ಒಳಸಂಚು ನಡೆಸುತ್ತಿದೆ. ಇಂತಹ ಸಂಚುಗಳಿಗೆ ಜಗ್ಗುವ ಮಾತೇ ಇಲ್ಲ. ಅಂತಹ ಪರಿಸ್ಥಿತಿ ನಿರ್ಮಾಣವಾದರೇ ದೇಶದ ಪ್ರತಿಯೊಬ್ಬ ದಲಿತನೂ ಒಗ್ಗೂಡಿ ಹೋರಾಡುತ್ತೇವೆ. ಯಾವ ಶಕ್ತಿಗಳು ಬಾಬಾಸಾಹೇಬರ ಆಶಯಗಳನ್ನು ಅಳಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ಕಾರರು ಹೇಳಿದರು.

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್.ಎ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥ್.ಟಿ, ಸುರೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಪಿ.ಶ್ರೀನಿವಾಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನಂತ್‌ಕುಮಾರ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ರೇವಣ್ಣಸಿದ್ದಪ್ಪ.ಬಿ ಕಲ್ಕುಂಟೆ, ಪ್ರಧಾನ ಕಾರ್ಯದರ್ಶಿ ಎನ್.ಹಾಲೇಶ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ.ಎಂ. (ಜಿಮ್), ಹಿರಿಯೂರು ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಸ್ತಾಫ್, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಗಿರೀಶ್, ಕೋಟಿ, ಪುನೀತ್, ಮಲ್ಲಿಕಾರ್ಜುನ್ ಶಿವು, ನರಸಿಂಹಮೂರ್ತಿ, ಸುನೀಲ್, ನವೀನ್, ಧನುಶ್, ವಿಶ್ವನಾಥ್, ಸ್ವಾಮಿ, ಅಂಜಿನಿ, ಮಂಜುಬೆಳ್ಳಿ, ಶ್ರೀಧರ್, ಶ್ರೀನಿವಾಸ್ ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.