ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರದಲ್ಲಿ ಜೂನ್ 28 ರಂದು 62 ಮಿ.ಮೀ. ಹೆಚ್ಚು ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆಯ ವಿವರ ಇಂತಿದೆ.

ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯ ಮೊಳಕಾಲ್ಮುರು 38.4 ಮಿ.ಮೀ, ರಾಂಪುರ 53, ರಾಯಾಪುರ 2.8. ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ತಳಕು 5.4. ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಬಬ್ಬೂರು 3.4, ಈಶ್ವರಗೆರೆ 12.2 ಮಿ.ಮೀ. ನಷ್ಟು ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.