ಚಿತ್ರದುರ್ಗ: ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ತಮ್ಮ ದೈನಂದಿನ ಜೀವನದಲ್ಲಿ ಗಾಂಧೀಜಿಯವರ ತತ್ವ, ಸಿದ್ದಾಂತ ಹಾಗೂ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್‍ಶಾಸ್ತ್ರೀಯವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ಮಾತನಾಡಿದರು.

 ನಾವೆಲ್ಲರೂ ಸಹ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿದ್ದಾಗಿನಿಂದಲೂ ಹಾಗೂ ಕರ್ತವ್ಯದ ಸಮಯದಲ್ಲಿಯು ಗಾಂಧೀ ಜಯಂತಿಯನ್ನು ಆಚರಿಸುವ ಮೂಲಕ ಅವರ ಆದರ್ಶಗಳ ಕುರಿತು ತಿಳಿದುಕೊಳ್ಳುತ್ತಾ ಬಂದಿದ್ದೇವೆ. ಅವರ ಸಿದ್ದಾಂತ ಹಾಗೂ ಆದರ್ಶಗಳು ಸರ್ವಕಾಲಿಕವಾಗಿದ್ದು ಇವುಗಳನ್ನು ನಾವು ಯಾವ ಹಂತದಲ್ಲಿರಲಿ ಪಾಲನೆ ಮಾಡಿದಲ್ಲಿ ಹಾಕಿಕೊಂಡ ಗುರಿಯಲ್ಲಿ ಯಶಸ್ಸನ್ನು ಕಾಣಬಹುದಾಗಿದೆ ಎಂದರು.

ಗಾಂಧಿ ಭವನ ನಿರ್ಮಾಣ;

 ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಮೂರು ಕೋಟಿ ರೂ.ಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲು ಉದ್ದೇಶಿಸಿದ್ದು ಈಗಾಗಲೇ ಮೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಸ್ಥಳ ಮಂಜೂರು ಆಗದೆ ಇರುವುದರಿಂದ ಇದರ ನಿರ್ಮಾಣ ವಿಳಂಬವಾಗಿದೆ. ಚಿತ್ರದುರ್ಗ ನಗರದಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲು ಆದಷ್ಟು ಬೇಗ ಜಮೀನು ಮಂಜೂರು ಮಾಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನ್ ಏರ್ಪಡಿಸಲಾಗಿತ್ತು. ಮೀನಾಕ್ಷಿ ಭಟ್ ಮತ್ತು ಕುಸುಮ ರಾಜ್ ರವರು ರಾಂಧುನ್, ವೈಷ್ಣವೋ ಜನತೋ ಹಾಗೂ ಶ್ರೀರಾಮಚಂದ್ರ ಕೃಪಾಳು ಭಜನ್ ಕುರಿತು ಹಾಡಿದರು.

 ಆರ್.ಭೂಮಿಕ ಮತ್ತು ಹಿಮಂತ್ ಭಗವದ್ಗೀತಾ ಪಠಣ, ಜತೀನ್ ಜೋಸೆಫ್ ಬೈಬಲ್ ಪಠಣ, ಮಾರುಫಾ ಸುಲ್ತಾನ ಖುರಾನ್ ಪಠಣ ಮಾಡಿದರು.

 ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ನಾಯ್ಕ, ಉಪವಿಭಾಗಾಧಿಕಾರಿ ಪ್ರಸನ್ನ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಸತೀಶ್‍ರೆಡ್ಡಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಪಿ.ಎಂ.ಗಣೇಶಯ್ಯ ನಿರೂಪಿಸಿ ವಂದಿಸಿದರು.