ಚಿತ್ರದುರ್ಗ: ಜೂನ್ 18 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಆಂಗ್ಲಭಾಷೆ ವಿಷಯದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆ ಸೇರಿದಂತೆ ಒಟ್ಟು 15,385 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 14,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 1040 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ 13532 ವಿದ್ಯಾರ್ಥಿಗಳು, ಹಾಗೂ ಹೊರ ಜಿಲ್ಲೆಯ 813 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.  ಗೈರು ಹಾಜರಾದವರ ಪೈಕಿ ಜಿಲ್ಲೆಯ 1031 ವಿದ್ಯಾರ್ಥಿಗಳಾದರೆ, 09 ವಿದ್ಯಾರ್ಥಿಗಳು ಹೊರ ಜಿಲ್ಲೆಯವರು.  ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ. ಈ ವಿಷಯದೊಂದಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2020 ಮುಕ್ತಾಯಗೊಂಡಿರುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.