ಬೆಂಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಈ ಟ್ವೀಟ್ ಮಾಡಿದ್ದಾರೆ.

 ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ಇದಲ್ಲದೆ ಚೆನ್ನೈನ ಆಸ್ಪತ್ರೆಯ ವೈದ್ಯರೊಂದಿಗೂ ನಾನು ಮಾತನಾಡಿದ್ದೇನೆ, ಶ್ರೀಗಳು ಶೀಘ್ರವೇ ಗುಣಮುಖರಾಗಲಿ ಎಂದು ಬರೆದಿದ್ದಾರೆ.