ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿರುವ ಪೊಲೀಸ್ ಇನ್‍ಸ್ಪೆಕ್ಟರ್(ಸಿವಿಎಲ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ ಬೆಂಗಳೂರು ನಗರದ 09 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಒಟ್ಟು 7498 ಅಭ್ಯರ್ಥಿಗಳಿಗೆ ಪತ್ರಿಕೆ-1ನ್ನು ಬೆಳಗ್ಗೆ10ರಿಂದ 11.30 ಗಂಟೆಗೆ ಮತ್ತು ಪತ್ರಿಕೆ-2ನ್ನುಮಧ್ಯಾಹ್ನ 2 ಗಂಟೆಯಿಂದ 3.30 ವರೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.

ಇಲಾಖಾ ವೆಬ್‍ಸೈಟ್ www.ksp.gov.inನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಕರಪತ್ರವನ್ನು ಮೇಲ್ಕಂಡ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ತಿಳಿಸಲಾಗಿದೆ.