ಚಿತ್ರದುರ್ಗಳ ನಾಳೆ ಮಂಗಳವಾರ ಬೆಳಗ್ಗೆ ೧೦.೩೦ಕ್ಕೆ ಡಾ. ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ವಿವಿಧ ಮಠಾಧೀಶರು, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಅಭಿಯಂತರರು, ಅಧಿಕಾರಿಗಳು, ರೈತಮುಖಂಡರು, ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರಕ್ಕೆ ಭೇಟಿ ನೀಡುವರು.

ಭದ್ರಾ ನೀರು ವಾಣಿವಿಲಾಸ ಸಾಗರಕ್ಕೆ ಬರುವುದು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಅದರ ಕಾಮಗಾರಿ ವೀಕ್ಷಿಸಿ ಶೀಘ್ರ ನಾಲೆಯಲ್ಲಿ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಭೆ ನಡೆಸಿ ಸರ್ಕಾರಕ್ಕೆ ಒತ್ತಾಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ರೈತರು ಭಾಗವಹಿಸಬೇಕೆಂದು ಕೋರಲಾಗಿದೆ.