ಚಿತ್ರದುರ್ಗ; ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಏ. 14 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಆದೇಶ ಹೊರಡಿಸಿದ್ದಾರೆ.

ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಿಆರ್‍ಪಿಸಿ 1973 ಕಲಂ 144 ರ ಮೇರೆಗೆ ಮಾ. 31 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.  ಇದೀಗ ಈ ನಿಷೇಧಾಜ್ಞೆಯನ್ನು ಜಿಲ್ಲೆಯಾದ್ಯಂತ ಮಾ. 31 ರ ಮಧ್ಯರಾತ್ರಿ 12 ಗಂಟೆಯಿಮದ ಏ. 14 ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಿಸಲಾಗಿದ್ದು, ಇದರನ್ವಯ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ 5 ಕ್ಕೂ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ.  ಈ ಆದೇಶವು ಸಾರ್ವಉನಿಕರ ಅತ್ಯಾವಶ್ಯಕ ವಸ್ತುಗಳು, ಆಹಾರ ಸಾಮಗ್ರಿಗಳ ಪೂರೈಕೆಗೆ, ತುರ್ತು ಆರೋಗ್ಯ ಸೇವೆ, ಅಗ್ನಿಶಾಮಕ ಸೇವೆಗಳು, ಶವಸಂಸ್ಕಾರ ಇನ್ನಿತರ ಅಗತ್ಯ ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.