ಚಿತ್ರದುರ್ಗ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಿಮಿತ್ಯ ನ. ೧೨ ರಂದು ಮತದಾನ ನಡೆಯಲಿದ್ದು, ಅಂದು ಸಂಬಂಧಪಟ್ಟ ಕ್ಷೇತ್ರದಲ್ಲಿ ಜರುಗುವ ಯಾವುದೇ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮೊಳಕಾಲ್ಮೂರು ತಾಲ್ಲೂಕಿನ ಕೋನಸಾಗರ ಮತ್ತು ಸಿದ್ದಾಪುರ, ಚಳ್ಳಕೆರೆ ತಾಲ್ಲೂಕಿನ ತಳಕು ಮತ್ತು ಹಿರೇಹಳ್ಳಿ, ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ, ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಮತ್ತು ದಿಂಡಾಪುರ, ಹೊಸದುರ್ಗ ತಾಲ್ಲೂಕಿನ ದೇವಿಗೆರೆ ಹಾಗೂ ಹೊಳಲ್ಕೆರೆ ತಾಲ್ಲೂಕಿನ ತುಪ್ಪದಹಳ್ಳಿ ಮತ್ತು ಮಲ್ಲಾಡಿಹಳ್ಳಿ ಗ್ರಾಮ ಪಂಚಾಯತಿ ಕೇತ್ರಗಳ ವ್ಯಾಪ್ತಿಯಲ್ಲಿ ನವೆಂಬರ್ ೧೨ ರಂದು ಮತದಾನ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆರ್ ವಿನೋತ್ ಪ್ರಿಯಾ ಆದೇಶ ಹೊರಡಿಸಿದ್ದಾರೆ.