ವಿಜಯಪುರ : 2019 ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರಮಟ್ಟದ ಬಸವ ಕೃಷಿ ಪ್ರಶಸ್ತಿ ಪ್ರಕಟವಾಗಿದ್ದು, ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಮಾದ್ಯಮದವರೊಂದಿಗೆ ಮಾತನಾಡಿದ ಅವರು  ಕೂಡಲ ಸಂಗಮ ಪಂಚಮಸಾಲಿ ಪೀಠದಿಂದ ನೀಡುವ 2019 ನೇ ವರ್ಷದ ಪ್ರತಿಷ್ಠಿತ ಪ್ರಶಸ್ತಿಯನ್ನು ಶರದ್ ಪವಾರ್ ಅವರಿಗೆ ನೀಡಲಾಗುತ್ತಿದೆ ಫೆಬ್ರವರಿ ಎರಡನೇ ವಾರದಲ್ಲಿ ಕೂಡಲ ಸಂಗಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು..