ಪಶುಭಾಗ್ಯ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಗೆ 2018-19 ನೇ ಸಾಲಿನಲ್ಲಿ ಸರ್ಕಾರದಿಂದ ಪಶುಭಾಗ್ಯ ಯೋಜನೆ ಅನುಷ್ಠಾನಗೊಳಿಸಲು 146 ಗುರಿ ನಿಗದಿಪಡಿಸಿದ್ದು, ಇದರಲ್ಲಿ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಕರು ಘಟಕ ಒಳಗೊಂಡಿರುತ್ತದೆ.

ಈ ಯೋಜನೆಯನ್ನು ಗ್ರಾಮ ವ್ಯಾಪ್ತಿಯ ವಾಣಿಜ್ಯ ಬ್ಯಾಂಕ್‍ಗಳ ಮೂಲಕ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟಜಾತಿ/ಪಂಗಡದವರಿಗೆ ಶೇ.50 ಹಾಗೂ ಇತರ ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನ ಇರುತ್ತದೆ. ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 9 ರೊಳಗಾಗಿ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಚಿತ್ರದುರ್ಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)