ಚಿತ್ರದುರ್ಗ: ನೂರು ಸಂವತ್ಸರಗಳು ತುಂಬುತ್ತಿರುವ ನಾಡೋಜ ಡಾ. ಪಾಟೀಲ ಪುಟ್ಟಪ್ಪನವರು ಇಂದು ಶ್ರೀಮುರುಘಾಮಠಕ್ಕೆ ಭೇಟಿ ನೀಡಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದರು.

ಇದೇ ಸಂದರ್ಭದಲ್ಲಿ ಧಾರವಾಡದಲ್ಲಿ ನಡೆಯುವ ಅವರ ಶತಮಾನೋತ್ಸವ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಡಾ. ಶಿವಮೂರ್ತಿ ಮುರುಘಾ ಶರಣರು ರೂ.5೦,೦೦೦/-ಗಳನ್ನು ನೀಡಿದರು.