ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಪೇದೆ (ಸಿವಿಲ್, ಕೆ.ಎಸ್.ಐ.ಎಸ್.ಎಫ್) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮಕ್ಕನುಗುಣವಾಗಿ ಜುಲೈ 3 ರಿಂದ 12 ರವರೆಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಚಿಸುವ ಅಭ್ಯರ್ಥಿಗಳು ನೇರವಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು ಇಲ್ಲಿರುವ ಕಚೇರಿಗೆ ಜುಲೈ 3 ರಂದು ಬೆಳಿಗ್ಗೆ 10 ಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ನಂ.08194-230485 ನ್ನು ಸಂಪರ್ಕಿಸಬಹುದಾಗಿದೆ.

(ಸಾಂದರ್ಭಿಕ ಚಿತ್ರ)