ಚಿತ್ರದುರ್ಗ: ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷರಾಗಿ ಕಸಬಾ ಹೋಬಳಿಯ ಜೆ.ಶಿವಪ್ರಕಾಶ್, ಭರಮಸಾಗರದ ವಿಜಯಲಕ್ಷ್ಮಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಬ್ಯಾಂಕ್‌ನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯನವರು ಘೋಷಿಸಿದರು.

ಬ್ಯಾಂಕ್‌ನ ನಿರ್ದೇಶಕರುಗಳು ಚುನಾವಣೆಯಲ್ಲಿದ್ದು, ನೂತನ ಅಧ್ಯಕ್ಷ ಜೆ.ಶಿವಪ್ರಕಾಶ್, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಇವರುಗಳನ್ನು ಅಭಿನಂದಿಸಿದರು.