ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್‌ 11 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಆದರೆ, ರಜೆ ಅವಧಿಯಲ್ಲಿ ಯಾವುದೇ ಶಿಕ್ಷಕರು ಕೇಂದ್ರ ಸ್ಥಾನ ಬಿಡದಂತೆ ಸೂಚನೆ‌ ನೀಡಿದ್ದಾರೆ.

ಕೆಲ ಖಾಸಗಿ ಶಾಲೆಗಳು 2020-21 ನೇ ಸಾಲಿನ ಶುಲ್ಕ ವಸೂಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭ ಮಾಡಿ‌ ಪೋಷಕರಿಗೆ ಅನಗತ್ಯ ಸಮಸ್ಯೆ ಸೃಷ್ಟಿ ಮಾಡುತ್ತಿರುವುದರ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 2020-21 ನೇ‌ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.