ಚಿತ್ರದುರ್ಗ : 2020 ರ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ನವದೆಹಲಿಗೆ ತೆರಳಿದಂತಹ ವ್ಯಕ್ತಿಗಳು ಮರಳಿ ಚಿತ್ರದುರ್ಗ ಜಿಲ್ಲೆಗೆ ಬಂದಿದ್ದಲ್ಲಿ, ಹಾಗೂ ಅಂತಹ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ (ಕೋವಿಡ್-19) ರೋಗ ಲಕ್ಷಣಗಳು ಕಂಡುಬಂದಿದ್ದಲ್ಲಿ ಕೂಡಲೆ ಸಹಾಯವಾಣಿ ಸಂಪರ್ಕಿಸಿ ಮಾಹಿತಿ ನೀಡಬೇಕು, ಅಲ್ಲದೆ ತಕ್ಷಣವೇ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಮನವಿ ಮಾಡಿದ್ದಾರೆ.

ಕಳೆದ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ನವದೆಹಲಿಗೆ ತೆರಳಿ, ಪುನಃ ಚಿತ್ರದುರ್ಗ ಜಿಲ್ಲೆಗೆ ಬಂದಿರುವ ವ್ಯಕ್ತಿಗಳು ಹಾಗೂ ಅಂತಹ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಸೋಂಕಿನ ರೋಗ ಲಕ್ಷಣಗಳು ಕಂಡುಬಂದಿದ್ದಲ್ಲಿ ಕೂಡಲೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಸಹಾಯವಾಣಿ ಸಂಖ್ಯೆ 08194-222050,  222044,  222027,  222038,  222056,  222035 ಮೂಲಕ ಸಂಪರ್ಕಿಸಿ ಮಾಹಿತಿ ನೀಡಬೇಕು.  ಅಲ್ಲದೆ ತಕ್ಷಣವೇ ಅಂತಹವರು ತಪ್ಪದೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.