ಬೆಂಗಳೂರು: ರಾಜ್ಯದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡು ತಿಂಗಳ ಪಡಿತರ ವಿತರಿಸಲು ಆಹಾರ ಇಲಾಖೆ ಕ್ರಮ ಕೈಗೊಂಡಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಲಾ 5 ಕೆಜಿ ಸೇರಿದಂತೆ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುವುದು. ಪ್ರತಿ ಅಂತ್ಯೋದಯ ಕಾರ್ಡ್ ಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಲಾ 35 ಕೆಜಿ ಸೇರಿದಂತೆ ಒಟ್ಟು 70 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಎರಡು ತಿಂಗಳಿಗೆ ಒಟ್ಟು 4 ಕೆಜಿ ಗೋಧಿಯನ್ನು ವಿತರಿಸಲಾಗುವುದು. ಎಪಿಎಲ್ ಕಾರ್ಡ್ ದಾರರಿಗೆ ಒಬ್ಬರು ಸದಸ್ಯರಿಗೆ 5 ಕೆಜಿ ಅಕ್ಕಿ, ಒಬ್ಬರಿಗಿಂತ ಹೆಚ್ಚಿನ ಸದಸ್ಯರು ಇದ್ದರೆ ಒಂದು ಕಾರ್ಡಿಗೆ 10 ಕೆಜಿ ಅಕ್ಕಿ ನೀಡಲಿದ್ದು ಪ್ರತಿ ಕೆಜಿಗೆ 15 ರೂಪಾಯಿ ದರ ನೀಡಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಬದಲು ಮೊಬೈಲ್ ಒಟಿಪಿ ಪಡೆದು ಆಹಾರಧಾನ್ಯ ವಿತರಿಸಲಾಗುವುದು. ಆಧಾರ್ ಕಾರ್ಡ್ ಲಿಂಕ್ ಆಗಿರುವ ಕಾರ್ಡುದಾರರ ಮೊಬೈಲ್ ನಂಬರ್ ಗೆ ಒಟಿಪಿ ಸಂಖ್ಯೆ ಬರುತ್ತದೆ. ಅದನ್ನು ನೀಡಿ ಪಡಿತರ ಪಡೆಯಬಹುದಾಗಿದೆ.!