ಚಿತ್ರದುರ್ಗ: ನಗರಸಭೆ ಕಾರ್ಯಾಲಯ ವತಿಯಿಂದ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ  ನಗರ ಜೀವನೋಪಾಯ ಯೋಜನೆಯಡಿ ಚಿತ್ರದುರ್ಗ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 11 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ನಗರಸಭೆ ಕಚೇರಿಯ ಡೇ-ನಲ್ಮ್ ಶಾಖೆಯಿಂದ ಪಡೆಯಬಹುದು ಎಂದು ನಗರಸಭೆಯ ಪೌರಾಯುಕ್ತ ಜೆ.ಟಿ ಹನುಮಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.