ಚಿತ್ರದುರ್ಗ: ಹೊಳಲ್ಕೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನ.

ಪ್ರಸಕ್ತ ಸಾಲಿನ ಡೇ ನಲ್ಮ್ ಯೋಜನೆಯಡಿ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯಡಿ ಹೊಳಲ್ಕೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುತಿನ ಚೀಟಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳಿಗೆ 10000 ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿ ನಮೂನೆ-2 ನೊಂದಿಗೆ ಭಾವಚಿತ್ರ, ಮಾರಾಟ ಪ್ರಮಾಣ ಪತ್ರ,  ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಮನೆಯಲ್ಲಿನ 18 ವರ್ಷ ಮೇಲ್ಪಟ್ಟ ಸದಸ್ಯರುಗಳ ಆಧಾರ್ ಕಾರ್ಡ್ ಲಗತ್ತಿಸಿ ಜು. 23 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಯನ್ನು ಹೊಳಲ್ಕೆರೆ ಪಟ್ಟಣ ಪಂಚಾಯತಿ ಕಚೇರಿಯ ಡೇ-ನಲ್ಮ್ ಶಾಖೆಯಿಂದ ಪಡೆಯಬಹುದಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.