ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವನ್ನು ಮೇ. 30 ರವರೆಗೆ ವಿಸ್ತರಿಸಲಾಗಿದೆ.

ಭರಮಸಾಗರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆ ಹಾಗೂ 11 ಸಹಾಯಕಿಯರ ಹುದ್ದೆಗಳಿಗೆ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ. 17 ರವರೆಗೆ ಅವಕಾಶವಿತ್ತು.  ಆದರೆ, ಕೊರೊನ ಸೋಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್‍ಡೌನ್ ವಿಸ್ತರಿಸಲಾಗಿರುವ ಕಾರಣ ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 30ರ ವರೆಗೆ ವಿಸ್ತರಿಸಲಾಗಿದೆ. ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ವೆಬ್‍ಸೈಟ್ ವಿಳಾಸ: www.anganwadirecruit.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.