ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕ ಸಭೆ ಸಮಾರಂಭಗಳಿಗೆ ಚುನಾವಣಾ ಆಯೋಗದ ಅನುಮತಿ ಅಗತ್ಯ. ಆದರೆ, ಮದುವೆ- ಹುಟ್ಟುಹಬ್ಬ ಸೇರಿದಂತೆ ಇನ್ನಿತರೆ ಖಾಸಗಿ ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗದ ಅನುಮತಿ ಅಗತ್ಯವಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್, ರಾಜಕೀಯ ವ್ಯಕ್ತಿಗಳು ಭಾಗವಹಿಸದ ಖಾಸಗಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಅಗತ್ಯವಿಲ್ಲ ಎಂದು ತಿಳಿಸಿದರು.