ಬೆಂಗಳೂರು: ಮುಂದಿನ ನಾಲ್ಕು ತಿಂಗಳು ಲಾಕ್ ಡೌನ್ ಮುಂದುವರೆಯುವ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸುಳಿವು ನೀಡಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 4 ತಿಂಗಳು ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು. ಮುಂದಿನ 4 ತಿಂಗಳಿಗೆ ಮರುಬಳಕೆ ಮಾಡುವ ಮಾಸ್ಕ್ ತಯಾರಿಕೆ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.