ಚಿತ್ರದುರ್ಗ : ನಗರದ ಶ್ರೀಮುರುಘಾಮಠಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಕಾರ್‍ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್‍ಯನಿರ್ವಹಣಾ ನಿರ್ದೇಶಕರಾದ ಡಾ. ಈ. ಚಿತ್ರಶೇಖರ್, ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ, ಕಾರ್‍ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ಡಿ.ಎಸ್. ಮಲ್ಲಿಕಾರ್ಜುನ್, ಫಾತ್ಯರಾಜನ್, ಶಾಸಕ ರಘುಮೂರ್ತಿ, ಮುಂತಾದವರಿದ್ದರು.