ಚಿಕ್ಕಮಗಳೂರು : ನಗರ ಠಾಣೆಯಲ್ಲಿ ಬಿಎಸ್ ವೈ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಜಿಲ್ಲಾ ಯೂತ್ ಕಾಂಗ್ರೆಸ್ ಮುಖಂಡ ಶಿವಕುಮಾರ್ ನೇತೃತ್ವದಲ್ಲಿ ಬಿಎಸ್ ವೈ ವಿರುದ್ಧ ದೂರು ದಾಖಲಿಸಿದ್ದಾರೆ.

 ಶಾಸಕರ ಖರೀದಿಗೆ 10ಕೋಟಿ ರೂ.ಆಮಿಷವೊಡ್ಡಿದ್ದು, ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈಗಾಗಲೇ ಬಿಜೆಪಿ ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು ನೀಡಲಾಗಿತ್ತು.