ಬೆಂಗಳೂರು : ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ರಾಜ್ಯದ ಜನತೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ರಾಜ್ಯದ ದಕ್ಷಿಣ ಒಳನಾಡು ಭಾಗಕ್ಕೆ ಹವಾಮಾನ ಇಲಾಕೆಯಿಂದ ಯಲ್ಲೂ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವುದರಿಂದ ಏ.7 ರಿಂದ (ನಾಳೆಯಿಂದ) ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

ಏಪ್ರಿಲ್ 7 ಮತ್ತು 8ರಂದು ರಾಜ್ಯದ ವಿವಿಧೆಡೆ ವರುಣ ಅಬ್ಬರಿಸಲಿದ್ದಾನೆ. ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ, ಹಾಸನ, ಕೊಡಗು ಮತ್ತು ಮೈಸೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಉಷ್ಣ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ತೀವ್ರತೆ ಕಡಿಮೆ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಸದ್ಯ ಬೇಸಿಗೆ ಇರೋದರಿಂದ ಸ್ಪಲ್ಪ ಪ್ರಮಾಣದಲ್ಲಿ ಸೋಂಕು ಹರಡುವಿಕೆಗೆ ನೈಸರ್ಗಿಕವಾಗಿ ತಡೆ ಬೀಳಬಹುದು ಎಂಬ ಲೆಕ್ಕಾಚಾರಗಳು ನಡೆದಿದ್ದವು.

ಇದೀಗ ಏಪ್ರಿಲ್ 7 ಮತ್ತು 8 ರಂದು ಮಳೆಯಾದರೆ ವಾತಾವರಣದಲ್ಲಿ ಬದಲಾಗುವ ಸಾಧ್ಯತೆಗಳಿವೆ. ಮಳೆಯಾದರೆ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತದೆ ಎನ್ನುವ ಆತಂಕ ಜನರಲ್ಲಿ ಮನೆ ಮಾಡಿದೆ.!