ಚಿತ್ರದುರ್ಗ : ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಕರ್ನಾಟಕ ಮತ್ತು ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಚಿತ್ರದುರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಎಸ್.ಜೆ.ಎಂ. ಆವರಣ ಚಿತ್ರದುರ್ಗ ಇಲ್ಲಿ ಆಯೋಜಿಸಿದ್ದ ಆರ್‍ಜಿಯುಹೆಚ್‍ಎಸ್ ರಾಜ್ಯಮಟ್ಟದ ಥ್ರೋಬಾಲ್ ಪಂದ್ಯಾವಳಿ-2019ಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾ ನಿರ್ದೇಶಕರಾದ ಡಾ.ಈ.ಚಿತ್ರಶೇಖರ್, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಬಸವೇಶ್ವರ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ|| ಜೆ. ಪ್ರಶಾಂತ್ ಹಾಗು ಇತರರು ಇದ್ದರು.