ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರೂ ಕೆಲವರು ಅನಗತ್ಯವಾಗಿ ಓಡಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಹೌದು, ಲಾಕ್ ಡೌನ್ ಉಲ್ಲಂಘಿಸಿ ಓಡಾಡುವವರ ವಾಹನಗಳನ್ನು ಸೀಜ್ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ನಿನ್ನೆಯಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ನಿನ್ನೆ ಒಂದೇ ದಿನ 900 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಮಾರ್ಚ್ 25 ರಿಂದ 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದ್ದರೂ ದೇಶದಲ್ಲಿ ಕೊರೊನಾ ಸೋಂಕಿತರ ಏರಿಕೆಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರವು ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ.