ಚಿತ್ರದುರ್ಗ: ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ನಡೆಯುವ ದಿನವಾದ ಏ.18 ರಂದು ನಗರದ ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ಕುರಿ-ಮೇಕೆ ಜಾನುವಾರು ಸಂತೆಯನ್ನು ರದ್ದು ಮಾಡಲಾಗಿದೆ ಎಂದು ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂತೆ ಪ್ರತಿ ಗುರುವಾರ ಚಿತ್ರದುರ್ಗ ನಗರದಲ್ಲಿ ನಡೆಯುತ್ತಾ ಬರುತ್ತಿದ್ದು. ಏ.18 ರಂದು ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಚಿತ್ರದುರ್ಗ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುವುದರಿಂದ ಕುರಿ-ಮೇಕೆ ಜಾನುವಾರು ಸಂತೆಯನ್ನು ರದ್ದುಗೊಳಿಸಲಾಗಿದೆ. ಇದೇ ರೀತಿಯಲ್ಲಿ ಮೇ.23 ರಂದು ಮತ ಎಣಿಕೆ ನಡೆಯುವ
ಸಂದರ್ಭದಲ್ಲಿಯೂ ಸಂತೆಯನ್ನು ರದ್ದು ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ