ಬೆಂಗಳೂರು: ವಿದ್ಯುತ್ ದರದಲ್ಲಿ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರ ವಿದ್ಯುತ್ ಉತ್ಪಾದನಾ ಕಂಪನಿಗಳು ಮತ್ತು ವಿದ್ಯುತ್ ವಿತರಣಾ ಕಂಪನಿಗಳಿಗೆ ಸೂಚಿಸಿದೆ.

ಹೀಗಾಗಿ ವಿದ್ಯುತ್ ಬಿಲ್ ನಲ್ಲಿ ಕಡಿತವಾಗುವ ಸಾಧ್ಯತೆ ಹೆಚ್ಚಿದೆ. ಹೌದು, ಸ್ವಾವಲಂಬಿ ಭಾರತ ಅಭಿಯಾನದ ಅಡಿಯಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ವಿದ್ಯುತ್ ಸಚಿವಾಲಯವು ಎರಡು ಹಂತದಲ್ಲಿ ಹಣ ಬಿಡುಗಡೆ ಮಾಡುತ್ತಿದೆ. ಪ್ರತಿ ಹಂತದಲ್ಲೂ 45,000 ಕೋಟಿ ಒದಗಿಸಲಿದ್ದು, ಒಟ್ಟು 90,000 ಕೋಟಿ ಬಿಡುಗಡೆಯಾಗಲಿದೆ. ಹಾಗಾಗಿ ಲಾಕ್ ಡೌನ್ ನಿಂದ ತತ್ತರಿಸಿರುವ ಮಂದಿಗೆ ವಿದ್ಯುತ್ ವಿನಾಯಿತಿ ಸಿಕ್ಕರೆ ತುಸು ನೆಮ್ಮದಿಯಾಗಬಹುದು.