ಬೆಂಗಳೂರು: ಶಿಕ್ಷಕರ ವರ್ಗಾವಣೆ ವಿಷಯಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದು, ಇನ್ನು ಮುಂದೆ ಶಿಕ್ಷಕರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ನಾನಾ ವೃಂದಗಳ ವಲಯಗಳಲ್ಲಿನ ವರ್ಗಾವಣೆ ಸೇವಾಧಿಯನ್ನು 5 ವರ್ಷಗಳಿಂದ 3 ವರ್ಷಗಳಿಗೆ ಇಳಿಕೆ ಮಾಡಿ ಹಾಗೂ ಕಡ್ಡಾಯ ವರ್ಗಾವಣೆ ಯಿಂದ ಕೆಲವೊಂದು ಪ್ರಕರಣಗಳಲ್ಲಿ ವಿನಾಯಿತಿ ನೀಡುವ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ.

ಮಾಧ್ಯಮಗಳಿಗೆ ಸಚಿವ ಸಂಪುಟ ಸಭೆ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಹಕಾರ ಸಚವಿ ಬಂಡೆಪ್ಪ ಕಾಶಂಪುರ ಶಿಕ್ಷಕರ ವರ್ಗಾವಣೆ ಸಮಸ್ಯೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿದ್ದೇವು ಆದರೂ ಸಹ ವಿಧೇಯಕಕ್ಕೆ ಇನ್ನು ಅನುಮೋದನೆ ದೊರೆತಿಲ್ಲ ಹೀಗಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು ಅಂತ ಹೇಳಿದರು.

ಪತಿ ಪತ್ನಿ ಪ್ರಕರಣದಲ್ಲಿ ಅವರ ಕುಟುಂಬದವರು ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆಯಲ್ಲಿ ಕಡ್ಡಾಯ ವರ್ಗಾವಣೆ ಯಿಂದ ವಿನಾಯತಿ ನೀಡಲಾಗಿದ್ದು, ಶಿಕ್ಷಕರ ಪತಿ ಅಥಾವ ಪತ್ನಿ ಸರಕಾರಿ ಅಥಾವ ಸಾರ್ವಜನಿಕ ವಲಯದ ಸೇವೆ ಸಲ್ಲಿಸುತ್ತಿದ್ದರೆ, ಅದೇ ಸ್ಥಳಕ್ಕೆ ವರ್ಗಾವಣೆ ಮಾಡಲು ಅವಕಾಶ ನೀಡುವುದಕ್ಕೆ ಪ್ರಸ್ತಾವನೆಗೂ ಸಂಪುಟ ಒಪ್ಪಿಗೆ ನೀಡಿದೆ ಅಂತ ಹೇಳಿದ್ದಾರೆ.