ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸೆ. 29 ರಂದು ಶೋಭಾಯಾತ್ರೆ ಹಮ್ಮಿಕೊಂಡಿದ್ದು, ಕಾನೂನು ಸುವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂದು ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸ್ಥಳೀಯ ರಜೆ ಘೋಷಿಸಿದ್ದಾರೆ.

ಸೆ. 29 ರಂದು ನಗರದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಲ್ಲದೆ, ಮುಂಬರುವ ದಿನಗಳಲ್ಲಿ ಶಾಲೆ ಕಾಲೇಜು ನಡೆಸುವ ಷರತ್ತು ವಿಧಿಸಿ, ಸೆ. 29 ರಂದು ಚಿತ್ರದುರ್ಗ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಸ್ಥಳೀಯ ರಜೆ ಘೋಷಿಸಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.