ಚಿತ್ರದುರ್ಗ: ಶ್ರೀರಾಮನವಮಿ ಪ್ರಯುಕ್ರ ಶನಿವಾರ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಶ್ರೀರಾಮನ ಫೋಟೋಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಲಾಯಿತು.

ಶ್ರೀರಾಮ ದೇವಸ್ಥಾನ ಹಾಗೂ ರಾಮನ ಪರಮಭಕ್ತ ಆಂಜನೇಯಸ್ವಾಮಿಯನ್ನು ವಿವಿಧ ಬಗೆಯ ಹೂವಿನಿಂದ ಸಿಂಗರಿಸಲಾಗಿತ್ತು. ಬುರುಜನಹಟ್ಟಿಯಲ್ಲಿರುವ ಕೋಟೆ ಆಂಜನೇಯಸ್ವಾಮಿ, ಆನೆಬಾಗಿಲು ಸಮೀಪವಿರುವ ಗಣೇಶ ದೇವಸ್ಥಾನದಲ್ಲಿ ಬೆಳಗಿನಿಂದ ಸಂಜೆಯವರೆಗೂ ಶ್ರದ್ದಾಭಕ್ತಿಯಿಂದ ಪೂಜೆ ಪುನಸ್ಕಾರಗಳು ನಡೆಯಿತು. ಬಹುತೇಕ ದೇವಾಲಯಗಳಲ್ಲಿ ಭಕ್ತರಿಗೆ ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.