ಮೈಸೂರು: ರಾಜ್ಯ ಸಚಿವ ಜಿ.ಟಿ.ದೇವೇಗೌಡ ಅವರು ಮೈಸೂರಿನಿಂದ ಮಳವಳ್ಳಿಗೆ ಪ್ರಯಾಣಿಸುತ್ತಿರುವ ವೇಳೆ ಅವರ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

 ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ದೇವೇಗೌಡರು ವಾಪಸಾಗುತ್ತಿರುವಾಗ ಮೈಸೂರಿನ ಕೊಲಂಬಿಯಾ ಆಸ್ಪತ್ರೆ ಬಳಿ ಈ ದುರ್ಘಟನೆ ನಡೆದಿದೆ. 

ಸಚಿವರ ಕಾರಿಗೆ ಸ್ವಲ್ಪ ಹಾನಿಯಾಗಿದ್ದು, ಅವರಿಗೆ ಬೇರೆ ಕಾರಿನ ವ್ಯವಸ್ಥೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.