ಚಿತ್ರದುರ್ಗ: ಸರ್ಕಾರದ ಬಗ್ಗೆ ಆಡಳಿತ ಪಕ್ಷದಲ್ಲಿ ಅಸಮಾಧಾನವಿದೆಯೆಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಒಪ್ಪಿಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನನ್ನನ್ನೂ ಸೇರಿಸಿ ಹಲವರಿಗೆ ಅಸಮಾಧಾನವಿದ್ದು ಪಕ್ಷದ ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮುಂದೆ ಪಕ್ಷ ಅಧಿಕಾರಕ್ಕೆ ಬರುವುದು ಕಷ್ಟ ಎಂದಿದ್ದಾರೆ.

ಸರ್ಕಾರದಿಂದ ಚಿತ್ರದುರ್ಗಕ್ಕೆ ಅನ್ಯಾಯವಾಗಿದ್ದು, ಭದ್ರಾ ಮೇಲ್ದಂಡೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ನಮ್ಮ ಜಿಲ್ಲೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ ಎಂದರು.