ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ..!

ಬೆಂಗಳೂರು : 2019 ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟವಾಗಿದ್ದು,  ಏಪ್ರೀಲ್ ತಿಂಗಳಲ್ಲಿ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಏಪ್ರಿಲ್ 23 ರ ಬೆಳಗ್ಗೆ 10.30 ರಿಂದ 11.50 ರ ವರಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ ಗಣಿತ ಪರೀಕ್ಷೆ, ಏ.24 ರ ಬೆಳಗ್ಗೆ 10.30 ರಿಂದ 11. 50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿವೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏ.25 ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ನಡೆಯಲಿವೆ. ಈ ಬಾರಿಯ ಸಿಇಟಿ ಪರೀಕ್ಷೆಗಳು ಹಳೇ ಮಾದರಿಯಲ್ಲೇ ನಡೆಯಲಿದೆ.