ಬೆಂಗಳೂರು: ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ)  ಮುಂದೂಡಲಾಗಿದೆ ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಸೋಮವಾರ ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಕಾರಣಕ್ಕೆ ದ್ವಿತೀಯ ಪಿಯು ಪರೀಕ್ಷೆಗಳು ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.