ಚಿತ್ರದುರ್ಗ:  ಚಿತ್ರದುರ್ಗ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ರಾಷ್ಟ್ರಿಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜು. 18 ಕೊನೆ ದಿನವಾಗಿದೆ.

ದೀನದಯಾಳ್ ಅಂತ್ಯದೋಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ಉಪಘಟಕವಾದ ಸ್ವಯಂ ಉದ್ಯೋಗ ಕಾರ್ಯಕ್ರಮದಲ್ಲಿ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ನಿರುದ್ಯೋಗಿ ಮತ್ತು ಅರೆ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಎಸ್‍ಇಪಿ ಘಟಕದಡಿ ಸ್ವಯಂ ಉದ್ಯೋಗಕ್ಕಾಗಿ 23  ಮತ್ತು  ಗುಂಪು ಉದ್ಯೋಗಕ್ಕಾಗಿ 02 ಜನರಿಗೆ ಸೌಲಭ್ಯ ಒದಗಿಸಲು ಗುರಿ ನಿಗದಿಪಡಿಸಲಾಗಿದೆ.  ಸ್ವಸಹಾಯ ಗುಂಪು ಕ್ರೆಡಿಟ್ ಲಿಂಕೇಜ್ ನಡಿ 11 ಗುರಿ ನಿಗದಿಪಡಿಸಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಬೆಂಬಲ ನೀಡುವ ಸಲುವಾಗಿ ಬೀದಿ ಬದಿ ವ್ಯಾಪಾರಿಗಳಿಗೆ  ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಲು 168 ಗುರಿ ನಿಗದಿಪಡಿಸಿದೆ.

ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಡೇನಲ್ಮ್  ಯೋಜನೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬೇಕೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.